ಡೈಲಿ ವಾರ್ತೆ: 02/MAY/2025

ಸುಹಾಸ್​ ಶೆಟ್ಟಿ ಕೊಲೆ ಬೆನ್ನಲ್ಲೇ ಮಂಗಳೂರಿನ ಸುತ್ತಮುತ್ತ 3 ಮಂದಿಗೆ ಚಾಕು ಇರಿತ.!

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿ ಕೊಲೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಮುಂಜಾಗ್ರತಾ ಕ್ರಮವಾಗಿ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸುಹಾಸ್​ ಶೆಟ್ಟಿ ಕೊಲೆ ಪ್ರಕರಣ ಬೆನ್ನಲ್ಲೇ ಮಂಗಳೂರಿನ ಸುತ್ತಮುತ್ತ ಕಣ್ಣೂರು, ಕೊಂಚಾಡಿ ಮತ್ತು ಉಳ್ಳಾಲದಲ್ಲಿ ಚಾಕು ಇರಿತ ಪ್ರಕರಣಗಳು ವರದಿಯಾಗಿವೆ.

ಉಳ್ಳಾಲದ ಫೈಝಲ್​, ಕೊಂಚಾಡಿಯ ಮೊಹ್ಮದ್​ ಲುಕ್ಮಾನ್,​​ ಕಣ್ಣೂರಿನ ಇರ್ಶಾದ್​ಗೆ ಎಂಬುವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಮೂವರಿಗೂ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮಂಗಳೂರು ವ್ಯಾಪ್ತಿಯಲ್ಲಿ ತಡರಾತ್ರಿ ಮತ್ತು ಮುಂಜಾನೆ ಈ ಪ್ರಕರಣಗಳು ನಡೆದಿವೆ.