ಡೈಲಿ ವಾರ್ತೆ: 08/MAY/2025

ಲಾರಿಗೆ ಕಾರು ಡಿಕ್ಕಿ: 6 ಮಂದಿ ಸ್ಥಳದಲ್ಲೇ ಸಾವು!

ಹಾವೇರಿ: ಲಾರಿಗೆ ಕಾರು ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೇ. 08 ರಂದು ಗುರುವಾರ ಬೆಳಿಗ್ಗೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೂಟೆಬೆನ್ನೂರು ಗ್ರಾಮದಲ್ಲಿ ನಡೆದಿದೆ.

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ಲಾರಿಗೆ ಅಪ್ಪಳಿಸಿದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಮೃತರನ್ನು ಹರಿಯಾಣ ಮೂಲದವರು ಎಂದು ಗುರುತಿಸಲಾಗಿದೆ.
ಇವರು ಆಡಿ ಎ6 ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.