



ಡೈಲಿ ವಾರ್ತೆ: 09/MAY/2025


ಪಾಕ್ ಕ್ಷಿಪಣಿ ದಾಳಿ ಬೆನ್ನಲ್ಲೇ ಹೈಅಲರ್ಟ್ – ದೇಶಾದ್ಯಂತ 24 ಏರ್‌ಪೋರ್ಟ್‌ಗಳು ತಾತ್ಕಾಲಿಕ ಬಂದ್

ನವದೆಹಲಿ: ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಭಾರತ ʻಆಪರೇಷನ್ ಸಿಂಧೂರʼ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.
ಭಿಕಾರಿಸ್ತಾನದ ಮೇಲೆ ಮಿಸೈಲ್‌ಗಳ ಸುರಿಮಳೆಗೈದಿದೆ. ಈ ನಡುವೆ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಆದ್ರೆ ಪಾಕ್ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತ ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.