



ಡೈಲಿ ವಾರ್ತೆ: 13/MAY/2025


ಎಸ್ ಡಿ ಪಿ ಐ ಕಾಪು ಕ್ಷೇತ್ರ ಸಮಿತಿ ವತಿಯಿಂದ ಕಾರ್ಯಕರ್ತರ ಸಮಾವೇಶ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಸಮಿತಿ ವತಿಯಿಂದ “ದಿಟ್ಟ ನಾಯಕತ್ವ ಬಲಿಷ್ಠ ಕಾರ್ಯಕರ್ತ” ಎಂಬ ಘೋಷಣೆಯೊಂದಿಗೆ ಕಾರ್ಯಕರ್ತರ ಹಾಗೂ ಸದಸ್ಯರ ಸಮಾವೇಶ ಮೂಳೂರಿನಲ್ಲಿರುವ ಖಾಸಗಿ ಸಭಾಂಗಣದಲ್ಲಿ ನಡೆಯಿತು.

ಈ ಸಮಾವೇಶದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ಕಾಪು ಕ್ಷೇತ್ರ ಅಧ್ಯಕ್ಷರಾದ ಸಾದಿಕ್ K P ವಹಿಸಿದ್ದರು. ಮುಖ್ಯ ಅತಿಥಿಯಾಗಿ ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಅತಾವುಲ್ಲಾ ಜೋಕಟ್ಟೆ ಆಗಮಿಸಿ ಪಕ್ಷವನ್ನು ಬಲಿಷ್ಠಗೊಳಿಸಲು ಕಾರ್ಯಕರ್ತರ ಕೊಡುಗೆಗಳೇನು ಎಂಬುದರ ಬಗ್ಗೆ ವಿವರಿಸಿದರು.


ಇನ್ನೋರ್ವ ಅತಿಥಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಶುದ್ದೀನ್ ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪಕ್ಷ ನಡೆಸಿದ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿದರು. ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಹನೀಫ್ ಮೂಳೂರ್ ಪ್ರಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಝಾಕ್ Y S ಉಪಸ್ಥಿತರಿದ್ದರು.