ಡೈಲಿ ವಾರ್ತೆ: 17/MAY/2025

ಪೆರ್ನಾಲ್ ನಲ್ಲಿ ಕೊರಗ ಮಕ್ಕಳ ಶೈಕ್ಷಣಿಕ ಬೇಸಿಗೆ ಶಿಬಿರ:
ಬೇಶಿಗೆ ಶಿಬಿರವು ವಿದ್ಯಾಭ್ಯಾಸಕ್ಕೆ ಪೂರಕವಾಗಲಿ – ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿಯವರು ಶಿರ್ವ ಸಮೀಪದ ಪೆರ್ನಾಲ್ ನಲ್ಲಿ ನಡೆಯುತ್ತಿರುವ ಕೊರಗ ಮಕ್ಕಳ ಶೈಕ್ಷಣಿಕ ಬೇಸಿಗೆ ಶಿಬಿರಕ್ಕೆ ಅತಿಥಿಯಾಗಿ ಆಗಮಿಸಿ ಮಕ್ಕಳಿಗೆ ಈ ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಿ ಎಂಬುದಾಗಿ ಮಕ್ಕಳಿಗೆ ಪ್ರೋತ್ಸಾಹ ನೀಡಿದರು. ಸಮಾಜದಲ್ಲಿ ಒಳ್ಳೆಯ ಶಿಕ್ಷಣವನ್ನು ಪಡೆದುಕೊಂಡು ಮಾದರಿಯಾಗಿ ಜೀವನಕಟ್ಟಿಕೊಳ್ಳಬೇಕು, ಅವಕಾಶಗಳನ್ನು ಉಪಯೋಗಿಸಿಕೊಂಡು, ಬದುಕಿನ ಗುರಿಯನ್ನು ತಲುಪುವಲ್ಲಿ ಇಂತಹ ಶಿಬಿರಗಳಲ್ಲಿ ಪ್ರಾಮಾಣಿಕವಾಗಿ ಪಾಲ್ಗೊಂಡು ನಿಮ್ಮ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಳ್ಳಿ ಎಂದು ಮಕ್ಕಳಿಗೆ ಶುಭಹಾರೈಸಿದರು.

ವೇದಿಕೆಯಲ್ಲಿ ವೈದ್ಯರಾದ ಡಾ. ಪಿ. ವಿ ಭಂಡಾರಿ, ಸಮಗ್ರ ಗ್ರಾಮೀಣ ಆಶ್ರಮದ ಅಧ್ಯಕ್ಷರಾದ ಅಶೋಕ್ ಶೆಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಡಾ. ಸಬಿತಾ ಗುಂಡ್ಮಿ ಮತ್ತು ವಿದ್ಯಾರ್ಥಿ ಪ್ರತಿನಿಧಿ ಕುಮಾರಿ ವಲ್ಮ ಇನ್ನ ಉಪಸ್ಥಿತರಿದ್ದರು.

ಹೇಮಂತ್ ಸ್ವಾಗತಿಸಿದರೆ, ದೀರಜ್ ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಸೌಜನ್ಗೈದರು.