



ಡೈಲಿ ವಾರ್ತೆ: 18/MAY/2025


ಹೈದರಾಬಾದ್: ಚಾರ್ಮಿನಾರ್ ಬಳಿ ಭಾರಿ ಬೆಂಕಿ ಅವಘಡ:10 ಮಂದಿ ಸಾವು

ಹೈದರಾಬಾದ್ : ಹೈದರಾಬಾದ್‌ನ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಸಮೀಪದ ಕಟ್ಟಡವೊಂದರಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ನಿಯಂತ್ರಿಸಲು ಸ್ಥಳಕ್ಕೆ ಒಟ್ಟು 11 ಅಗ್ನಿಶಾಮಕ ವಾಹನಗಳು ದೌಡಾಯಿಸಿ, ಕಾರ್ಯಾಚರಣೆ ನಡೆಸಿದ್ದಾರೆ. ಸಿಬ್ಬಂದಿಯು ಒಬ್ಬ ಮಹಿಳೆ ಸೇರಿದಂತೆ ಹಲವರನ್ನು ರಕ್ಷಿಸಿದ್ದಾರೆ. ಆದರೆ 8 ಜನರು ಬೆಂಕಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಉಸ್ಮಾನಿಯಾ, ಹೈದರ್‌ಗುಡ ಮತ್ತು ಡಿಆರ್‌ಡಿಒ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಬೆಂಕಿ ನಂದಿಸಲಾಗಿದೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂಬ ಶಂಕೆ ಇದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಕಿ ಅವಘಡದಿಂದ ಸ್ಥಳೀಯರು ಕೆಲಕಾಲ ತೀವ್ರ ಆತಂಕಗೊಂಡಿದ್ದರು.
ಹೈದರಾಬಾದ್‌ನಲ್ಲಿ ಇತ್ತೀಚೆಗೆ ಮೇ 14ರಂದು ಸಂಭವಿಸಿದ್ದ ಮತ್ತೊಂದು ಘಟನೆಯಲ್ಲಿ, ಬೇಗಂ ಬಜಾರ್‌ನಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು.