



ಡೈಲಿ ವಾರ್ತೆ: 20/MAY/2025


ಬಂಟ್ವಾಳ| ವರುಣಾರ್ಭಟಕ್ಕೆ ಕುಸಿದು ಬಿದ್ದ ಮನೆ

ಬಂಟ್ವಾಳ: ಕಳೆದೆರಡು ದಿನಗಳಿಂದ ನಿರಂತರವಾಗಿ
ಸುರಿಯುತ್ತಿರುವ ಮಳೆಯ ಪರಿಣಾಮ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಬಳಿಯ ಪಲ್ಲಿಕಂಡದಲ್ಲಿ ಸೋಮವಾರ (ಮೇ.19) ತಡರಾತ್ರಿ ಮನೆಯೊಂದು ಕುಸಿದು ಬಿದ್ದ ಘಟನೆ ನಡೆದಿದೆ.
ಪಲ್ಲಿಕಂಡ ನಿವಾಸಿ ಸಿಸಿಲಿಯಾ ಪಿಂಟೊ ಅವರ ಮನೆ ಕುಸಿದು ಬಿದ್ದಿದ್ದು, ಯಾವುದೇ ಜೀವಹಾನಿ ಉಂಟಾಗಿಲ್ಲ. ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸುವ ಕಾರ್ಯ ನಿರ್ವಹಿಸುವಂತೆ ಬಂಟ್ವಾಳ ಪುರಸಭಾ ಸದಸ್ಯ ಬಿ.ವಾಸು ಪೂಜಾರಿ ಲೊರೆಟ್ಟೋ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.