ಡೈಲಿ ವಾರ್ತೆ: 20/MAY/2025

ಮಾಬುಕಳ| ಸೈಕಲಿಗೆ
ಕಾರು ಡಿಕ್ಕಿ – ಸವಾರ ಮೃತ್ಯು

ಕೋಟ: ಕಾರೊಂದು ಸೈಕಲಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಘಟನೆ ಬ್ರಹ್ಮಾವರ ತಾಲ್ಲೂಕಿನ ಮಾಬುಕಳ ಸಮೀಪ ನಡೆದಿದೆ.

ಸೈಕಲ್ ಸವಾರ ಹರಿಶ್ಚಂದ್ರ (49) ಮೃತಪಟ್ಟ ದುರ್ದೈವಿ. ಪರಿಚಯದವರ ಗೃಹಪ್ರವೇಶ ಕಾರ್ಯಕ್ರಮ ಮುಗಿಸಿಕೊಂಡು ಮಾಬುಕಳ ಜಂಕ್ಷನ್ ಬಳಿ ಸೈಕಲ್ ನಲ್ಲಿ ಬರುತ್ತಿದ್ದಾಗ ಅತೀ ವೇಗ ಹಾಗೂ ಅಜಾಗರೂಕತೆ ಚಲಾಯಿಸಿಕೊಂಡು ಬಂದ ಕಾರೊಂದು ಸೈಕಲ್ಲಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಆಗ ಸೈಕಲ್ ಸವಾರ ಹರಿಶ್ಚಂದ್ರ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಮಣಿಪಾಲದ ಕೆ ಎಂ ಸಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.