



ಡೈಲಿ ವಾರ್ತೆ: 20/MAY/2025


ಮಂಗಳೂರು | ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ: ಆರೋಪಿ ಬಂಧನ

ಮಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ಮುಂಬೈನ ಮಸೀವುಲ್ಲಾ ಅತೀವುಲ್ಲಾ ಖಾನ್ (36) ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.
ಆರೋಪಿಯು ದೂರುದಾರರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 1,65,000 ರೂ. ಹಣವನ್ನು ಪಡೆದುಕೊಂಡಿದ್ದನು. ಅಲ್ಲದೇ, ಹಲವಾರು ಯುವಕರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸುಮಾರು 1 ಕೋಟಿ 82 ಲಕ್ಷ ರೂ. ಹಣವನ್ನು ಪಡೆದು ವಂಚಿಸಿರುವ ಕುರಿತು ಮಂಗಳೂರು ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಬಿ ಘಟಕದಲ್ಲಿ ತನಿಖೆಯಲ್ಲಿದೆ.
ಆರೋಪಿಯ ವಿರುದ್ದ ಈಗಾಗಲೇ ಯಾವುದೇ ಒಪ್ಪಿಗೆ ಪತ್ರ ಪಡೆಯದೇ ಕಂಪನಿ ತೆರೆದು ವಿದೇಶದಲ್ಲಿ ಉದ್ಯೋಗ ಕೊಡಿಸುವ ಬಗ್ಗೆ ಇಮಿಗ್ರೇಷನ್ ಅಧಿಕಾರಿಗಳಿಂದ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 2024ರ ಡಿಸೆಂಬರ್ ನಲ್ಲಿ ಪ್ರಕರಣ ದಾಖಲಾಗಿದೆ.
ಈ ಮೇಲಿನ ಎರಡೂ ಪ್ರಕರಣಗಳನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯಿಂದ ಹೆಚ್ಚಿನ ತನಿಖೆಗಾಗಿ ಸಿಸಿಬಿ ಘಟಕಕ್ಕೆ ವರ್ಗಾಯಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.