ಡೈಲಿ ವಾರ್ತೆ: 20/MAY/2025

ಮಾಣಿ : ಗ್ರಾಮ ಪಂಚಾಯತ್ ಅರಿವು ಕೇಂದ್ರದ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಬಂಟ್ವಾಳ : ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಬೇಸಿಗೆ ಶಿಬಿರ ಪೂರಕವಾಗವಾಗಲಿದೆ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಹೇಳಿದರು.

ಮಾಣಿ ಗ್ರಾಮ ಪಂಚಾಯತ್ ನ ಅರಿವು ಕೇಂದ್ರದ ವತಿಯಿಂದ ಜರುಗಿದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಕ್ಕಳ ಜ್ಞಾನದ ಬೆಳವಣಿಗೆಯ ದೃಷ್ಟಿಯಿಂದ ಸರಕಾರ ಹಮ್ಮಿಕೊಳ್ಳುತ್ತಿರುವ ಇಂತಹ ಕಾರ್ಯಕ್ರಮ ಶ್ಲಾಘನೀಯ ಎಂದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚಾಯತ್ ಉಪಾಧ್ಯಕ್ಷೆ ಸುಜಾತ, ಮಾಜಿ ಅಧ್ಯಕ್ಷರಾದ ಇಬ್ರಾಹಿಂ.ಕೆ.ಮಾಣಿ, ಬಾಲಕೃಷ್ಣ, ಸದಸ್ಯರಾದ ನಾರಾಯಣ ಶೆಟ್ಟಿ, ಪ್ರೀತಿ ಡಿನ್ನಾ ಪಿರೇರಾ, ಮಿತ್ರಾಕ್ಷಿ ಭಾಗವಹಿಸಿದ್ದರು.

ಗ್ರಂಥಪಾಲಕಿ ಗೀತಾಶ್ವಿನಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.