



ಡೈಲಿ ವಾರ್ತೆ: 21/MAY/2025


ಗೃಹ ಸಚಿವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇ.ಡಿ ದಾಳಿ

ತುಮಕೂರು: ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED Raid) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ಎಸ್ಐಟಿ ಕಾಲೇಜಿನ ಮೇಲೆ ಇಡಿ ದಾಳಿ ನಡೆದಿದೆ. ಅಲ್ಲದೆ, ನೆಲಮಂಗಲದ ಟಿ.ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ರೇಡ್ ಮಾಡಲಾಗಿದೆ. ಸದ್ಯ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.