ಡೈಲಿ ವಾರ್ತೆ: 22/MAY/2025

ಕುಂದಾಪುರ| ಕರ್ತವ್ಯನಿರತ ಪೊಲೀಸ್ ಇನ್ಸ್ಪೆಕ್ಟರ್ ನಂಜಪ್ಪ ಸಾವು

ಕುಂದಾಪುರ: ಕುಂದಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ (59) ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಬುಧವಾರ ರಾತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ
ನಂಜಪ್ಪ ಅವರು ಕಳೆದ ಒಂದು ವರ್ಷದಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಂಜಪ್ಪ ಅವರು
ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ.

ಇನ್ಸ್ಪೆಕ್ಟರ್ ಸಾವಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.