ಡೈಲಿ ವಾರ್ತೆ: 23/MAY/2025

ಅತ್ಯಾಚಾರದ ಆರೋಪದಲ್ಲಿ ನಟ ಮಡೆನೂರು ಮನು 2 ದಿನ ಪೊಲೀಸ್ ಕಸ್ಟಡಿಗೆ

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ಅವರು ಪೊಲೀಸರ ಅತಿಥಿ ಆಗಿದ್ದಾರೆ. ಸಹ ನಟಿಯೊಬ್ಬರು ಅತ್ಯಾಚಾರ ಆರೋಪ ಹೊರಿಸಿದ ಹಿನ್ನೆಲೆಯಲ್ಲಿ ಮನುಗೆ ಸಂಕಷ್ಟ ಎದುರಾಗಿದೆ. ಮೇ 22ರಂದು ಮನು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇಂದು (ಮೇ 23) ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಮಡೆನೂರು ಮನು ಅವರನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

‘ನನ್ನ ಮೇಲೆ ಅತ್ಯಾಚಾರ ಆಗಿದೆ. ಮದುವೆ ಆಗುವುದಾಗಿ ನಂಬಿಸಿ ಮನು ಮೋಸ ಮಾಡಿದ್ದಾನೆ. 2 ಬಾರಿ ಗರ್ಭಪಾತ ಆಗಿದೆ. ಬಲವಂತವಾಗಿ ಕುಡಿಸಿ, ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ನನ್ನ ಖಾಸಗಿ ವಿಡಿಯೋ ಮಾಡಿಕೊಂಡಿದ್ದಾನೆ’ ಎಂದು ಸಹ-ನಟಿಯೊಬ್ಬರು ಮಡೆನೂರು ಮನು ಮೇಲೆ ಆರೋಪಗಳ ಮಳೆ ಸುರಿಸಿದ್ದಾರೆ. ಈ ಕೇಸ್​ನಲ್ಲಿ ಮನು ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.