



ಡೈಲಿ ವಾರ್ತೆ: 25/MAY/2025


ಕಾಫಿನಾಡಲ್ಲಿ ಗಾಳಿ-ಮಳೆ ಅಬ್ಬರಕ್ಕೆ ಚಾಲಕನ ನಿಯಂತ್ರಣ ತಪ್ಪಿ ನದಿಯ ಹಳ್ಳಕ್ಕೆ ಬಿದ್ದ ಪ್ರವಾಸಿ ಕಾರು!

ಚಿಕ್ಕಮಗಳೂರು: ಕಾಫಿನಾಡಲ್ಲಿ ಪ್ರವಾಸಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉಪನದಿಯ ಹಳ್ಳಕ್ಕೆ ಬಿದ್ದ ಘಟನೆ ಮೇ. 25 ರಂದು ಭಾನುವಾರ ಬೆಳಿಗ್ಗೆ ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಗ್ರಾಮದಲ್ಲಿ ನಡೆದಿದೆ.
ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಹೇಮಾವತಿ ನದಿಯ ಉಪನದಿಯ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ.
ಸಮಾಜ ಸೇವಕ ಆರೀಫ್ ಅವರಿಂದ ಕಾರಿನಲ್ಲಿದ್ದವರನ್ನು ರಕ್ಷಿಸಲಾಗಿದೆ. ಸೊಂಟಕ್ಕೆ ಹಗ್ಗ ಕಟ್ಟಿ ಹಳ್ಳಕ್ಕೆ ಇಳಿದು ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಲಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.