



ಡೈಲಿ ವಾರ್ತೆ: 25/MAY/2025


ಮಂಗಳೂರು| ಹಿರಿಯ ಕಾಂಗ್ರೆಸ್ ಮುಖಂಡ, ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ವಿಧಾನ ಪರಿಷತ್ ನ ಮುಖ್ಯ ಸಚೇತಕ ಸಲಿಂ ಅಹ್ಮದ್ ಭೇಟಿ

ಬಂಟ್ವಾಳ : ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಕರ್ನಾಟಕ ವಿಧಾನ ಪರಿಷತ್ ನ ಮುಖ್ಯ ಸಚೇತಕ ಸಲಿಂ ಅಹ್ಮದ್ ಭಾನುವಾರ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಖಾಸಗಿ ಕಾರ್ಯಕ್ರಮದ ಪ್ರಯುಕ್ತ ನಾನು ಜಿಲ್ಲೆಗೆ ಬಂದಿದ್ದು, ಪೂಜಾರಿಯವರನ್ನು ಭೇಟಿ ಮಾಡಬೇಕೆಂದು ನಿಶ್ಚಯಿಸಿದ್ದೆ. ಹಾಗೆಯೇ ಅವರ ಮನೆಗೆ ಭೇಟಿ ಆಶೀರ್ವಾದ ಪಡೆದಿದ್ದೇನೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಯುವ ಕಾಂಗ್ರೆಸ್ ವತಿಯಿಂದ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲೂ ಭಾಗವಹಿಸಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರಾದ ಕರುಣಾಕರ ಶೆಟ್ಟಿ, ತೇಜಸ್ವಿ ರಾಜ್, ಬೇಬಿ ಕುಂದರ್, ಜಯಂತಿ ಪೂಜಾರಿ, ಚಿತ್ತರಂಜನ್ ಶೆಟ್ಟಿ ಬೊಂಡಾಲ ಉಪಸ್ಥಿತರಿದ್ದರು.