ಡೈಲಿ ವಾರ್ತೆ: 25/MAY/2025

ಕಾಂಗ್ರೆಸ್ ಸರ್ಕಾರ 2 ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನಲೆ -ಉಡುಪಿ ಜಿಲ್ಲಾ ಯುವಕಾಂಗ್ರೆಸ್ ವತಿಯಿಂದ ಜಿಲ್ಲಾಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಜನರ ಬದುಕಿನಲ್ಲಿ ಬದಲಾವಣೆ ತರುವ ಮೂಲಕ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಅಜ್ಜರಕಾಡು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕೊಡವೂರು, ರಾಜ್ಯ ಯುವ ಕಾಂಗ್ರೆಸ್ಸಿನ ಉಪಾಧ್ಯಕ್ಷರಾದ ಮಂಜುನಾಥ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಸೋನಿಯಾ,ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ,ಉಡುಪಿ ಜಿಲ್ಲಾ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ಅಮೀನ್,ನವೀನ್ ಸಾಲಿಯಾನ್, ಅಜಿತ್ ಶೆಟ್ಟಿ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಪ್ರಮೋದ್ ಪೂಜಾರಿ, ಅರ್ಜುನ್ ನಾಯರಿ,ಅತೀಫ್ ಕಾಪು, ಪ್ರ ಕಾರ್ಯದರ್ಶಿಗಳಾದ ಸಂಜಯ್ ಆಚಾರ್ಯ,ಯೋಗಿಶ್ ಇನ್ನಾ ,ಮಂಜುನಾಥ ಜೋಗಿ,ಪ್ರದೀಪ್ ಶೆಟ್ಟಿ ನಲ್ಲೂರು ಮತ್ತಿತರರು ಉಪಸ್ಥಿತರಿದ್ದರು.