ಡೈಲಿ ವಾರ್ತೆ: 29/MAY/2025

ಉಡುಪಿ ಎಸ್ಪಿ ಡಾ. ಅರುಣ್ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ವರ್ಗಾವಣೆ, ಹರಿರಾಂ ಶಂಕ‌ರ್ ನೂತನ ಎಸ್ಪಿ

ಉಡುಪಿ : ಉಡುಪಿ ಪೊಲೀಸ್ ಅಧೀಕ್ಷರಾಗಿದ್ದ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ

ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಂ ಶಂಕರ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.