ಡೈಲಿ ವಾರ್ತೆ: 04/JUNE/2025

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ, ಶಿವಮೊಗ್ಗದಲ್ಲಿ ಯುವಕ ಸಾವು

ಶಿವಮೊಗ್ಗ: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ
ಅಪಘಾತವಾಗಿ ಯುವಕನೊಬ್ಬ ಸಾ‌ವನ್ನಪ್ಪಿದ ಘಟನೆ ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ತಡರಾತ್ರಿ ನಡೆದಿದೆ.

ವೆಂಕಟೇಶ ನಗರದ ನಿವಾಸಿ ಅಭಿ (21) ಮೃತ ಯುವಕ.

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕರು ಬೈಕ್‌ ಜಾಥಾ ನಡೆಸಿದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿದ್ದು ತೀವ್ರ ಗಾಯಗೊಂಡಿದ್ದ ಅಭಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.

ಅಪಘಾತವಾಗುತ್ತಿದ್ದಂತೆ ಯುವಕರು ಕೂಡಲೆ ನೆರವಿಗೆ ಧಾವಿಸಿದ್ದಾರೆ. ಆದರೆ ಈ ವೇಳೆಗಾಗಲೆ ಅಭಿ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.