



ಡೈಲಿ ವಾರ್ತೆ: 04/JUNE/2025

RCB ಸಂಭ್ರಮಾಚರಣೆ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ ಎರಡು ಸಾವು

ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆಯಲಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ ಇಬ್ಬರು ಆರ್ಸಿಬಿ ಅಭಿಮಾನಿ ಮೃತಪಟ್ಟಿದ್ದಾರೆ.
ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ಬ್ಯಾರಿಕೇಡ್ ಬಿದ್ದು ಮೂವರ ಕಾಲು ಮುರಿದಿದೆ. ಆರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಜನಸ್ತೋಮವನ್ನು ನಿಯಂತ್ರಿಸಲು ಪೋಲಿಸರು ಹರಸಾಹಸ ಪಡುತ್ತಿದ್ದಾರೆ.