ಡೈಲಿ ವಾರ್ತೆ: 04/JUNE/2025

RCB ಸಂಭ್ರಮಾಚರಣೆ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆಯಲಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ ಏಳು ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.​

ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಆರಕ್ಕೂ ಹೆಚ್ಚು ಆರ್​ಸಿಬಿ ಅಭಿಮಾನಿಗಳ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೂ ದಾಖಲಿಸಾಲಗಿದ್ದ ನಾಲ್ವರು ಆರ್​ಸಿಬಿ ಅಭಿಮಾನಿಗಳು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ. 10 ಮಂದಿ ಅಭಿಮಾನಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.