ಡೈಲಿ ವಾರ್ತೆ: 06/JUNE/2025

ಬ್ರಹ್ಮಾವರ| ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ್ ಪೂಜಾರಿ ಲೋಕಾಯುಕ್ತ ಬಲೆಗೆ

ಬ್ರಹ್ಮಾವರ| ಬ್ರಹ್ಮಾವರದ ಮೆಸ್ಕಾಂ ಕಚೇರಿ ಮೇಲೆ ಶುಕ್ರವಾರ ಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ದಾಳಿಯಲ್ಲಿ ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ್ ಪೂಜಾರಿ ಲಂಚ ಸ್ವೀಕರಿಸುತ್ತಿರುವಾಗಲೇ ಸಿಕ್ಕಿಬಿದ್ದಿದ್ದಾರೆ.

ಸಾರ್ವಜನಿಕರ ದೂರಿನ ಮೇರೆಗೆ ದಾಳಿ ನಡೆಸಿ, 20ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ್ ಪೂಜಾರಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ಈ ಹಿಂದೆ ಕುಂದಾಪುರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದ ಅಶೋಕ್ ಪೂಜಾರಿ, ಕಳೆದ 3 – 4 ವರ್ಷಗಳಿಂದ ಬ್ರಹ್ಮಾವರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ದೂರುದಾರರ ದೂರಿನ ಮೇಲೆ ವಸತಿಗೆ ವಿದ್ಯುತ್ ಸಂಪರ್ಕ ಕೊಡಲು 20000 ರೂ ಲಂಚಕ್ಕೆ ಬೇಡಿಕೆ ಇಟ್ಟ ಬ್ರಹ್ಮಾವರ ಮೆಸ್ಕಾಂ ನ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಅಶೋಕ ಪೂಜಾರಿ ಅವರನ್ನು ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಉಡುಪಿ ಲೋಕಾಯುಕ್ತ ಪೊಲೀಸರು ಬಂಧಿಸಿರುತ್ತಾರೆ.

ಕಾರ್ಯಚರ ಣೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಶ್ರೀ ಕುಮಾರಚಂದ್ರರವರ ಮಾರ್ಗದರ್ಶನದಲ್ಲಿ ಮಂಜುನಾಥ್ ಶಂಕರ ಹಳ್ಳಿ, ಪ್ರಭಾರ ಪೊಲೀಸ್ ಉಪಾಧೀಕ್ಷಕರು. ಪೊಲೀಸ್ ನೀರಿಕ್ಷಕರು ರಾಜೇಂದ್ರ ನಾಯಕ್ ಎಂ, ಎನ್ .ಹಾಗೂ ಮಂಗಳೂರು ಲೋಕಾಯುಕ್ತ ಪೊಲೀಸ್ ನೀರಿಕ್ಷಕರು ಶ್ರೀಮತಿ ಭಾರತಿ, ಹಾಗೂ ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರೋಹಿತ್, ಸತೀಶ್ ಹಂದಾಡಿ, , ಮಲ್ಲಿಕಾ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ರಮೇಶ್, ಸತೀಶ್ ಆಚಾರ್ಯ, ರಾಘವೇಂದ್ರ ಹೊಸಕೋಟೆ, ಸುಧೀರ್ ಹಾಗೂ ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳು ಇದ್ದರು.