ಡೈಲಿ ವಾರ್ತೆ: 06/JUNE/2025

ಬೆಂಗಳೂರು ಕಾಲ್ತುಳಿತ ಪ್ರಕರಣ| ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು!

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ RCB ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿ ವಿರುದ್ಧವೂ ಪೊಲೀಸರಿಗೆ ಶುಕ್ರವಾರ ದೂರು ನೀಡಲಾಗಿದೆ.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ RCB, KSCA, DNA ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.

ಇದೀಗ ವಿರಾಟ್ ಕೊಹ್ಲಿ ವಿರುದ್ಧವೂ ಎಫ್​ಐಆರ್ ದಾಖಲಿಸುವಂತೆ ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ. ಅಲ್ಲದೆ ಈ ಸಂಬಂಧ ನೈಜ ಹೋರಾಟಗಾರರ ವೇದಿಕೆಯ ಎಚ್ ಎಂ ವೆಂಕಟೇಶ್ ಅವರು ವಿರಾಟ್ ಕೊಹ್ಲಿ ವಿರುದ್ಧ ದೂರು ನೀಡಿದ್ದಾರೆ.

ಮೊದಲು ದೂರು ಸ್ವೀಕರಿಸಲು ಹಿಂದೇಟು ಹಾಕಿದ ಕಬ್ಬನ್ ಪಾರ್ಕ್ ಪೊಲೀಸರು, ಹಲವು ಗಂಟೆಗಳ ಬಳಿಕ ಕೊನೆಗೂ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಈಗಾಗಲೇ ದಾಖಲಾಗಿರುವ ಎಫ್ಐಆರ್ ಜತೆ ಇದನ್ನು ಪರಿಗಣಿಸುವುದಾಗಿ ಹಿಂಬರಹ ನೀಡಿದ್ದಾರೆ.