



ಡೈಲಿ ವಾರ್ತೆ: 07/JUNE/2025


ಬೆಂಗಳೂರು ಕಾಲ್ತುಳಿತ ಪ್ರಕರಣ: ನೈತಿಕ ಹೊಣೆ ಹೊತ್ತು KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಟ್ರೋಫಿ ಆಚರಣೆಯ ಸಂದರ್ಭದಲ್ಲಿ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಗೆ ನೈತಿಕ ಹೊಣೆ ಹೊತ್ತು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಕಾರ್ಯದರ್ಶಿ ಮತ್ತು ಖಜಾಂಚಿ ಹುದ್ದೆಗಳಿಗೆ ಎ ಶಂಕರ್ ಮತ್ತು ಇ ಎಸ್ ಜೈರಾಮ್ ರಾಜೀನಾಮೆ ನೀಡಿದ್ದಾರೆ.
ಮೊನ್ನೆ ಗುರುವಾರ ರಾತ್ರಿ ಕೆಎಸ್ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಶಂಕರ್ ಮತ್ತು ಜೈರಾಮ್ ತಿಳಿಸಿದ್ದಾರೆ.
ಕಳೆದ ಎರಡು ದಿನಗಳಲ್ಲಿ ನಡೆದ ಅನಿರೀಕ್ಷಿತ ಮತ್ತು ದುರದೃಷ್ಟಕರ ಘಟನೆಯಲ್ಲಿ ನಮ್ಮ ಪಾತ್ರ ಬಹಳ ಸೀಮಿತವಾಗಿದ್ದರೂ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ ಹುದ್ದೆಗಳಿಗೆ ನಾವು ರಾಜೀನಾಮೆ ನೀಡಿದ್ದೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.