ಡೈಲಿ ವಾರ್ತೆ: 07/JUNE/2025

ಬಂಟ್ವಾಳ|ದೇವಸ್ಥಾನದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಬಂಟ್ವಾಳ: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ
ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಸ್ನಾನಕ್ಕೆಂದು ಇಳಿದ ವಿದ್ಯಾರ್ಥಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜೂ. 7 ರಂದು ಶನಿವಾರ ಬೆಳಿಗ್ಗೆ ಸಂಭವಿಸಿದೆ.

ವಗ್ಗ ಕಾರಿಂಜ ಕ್ರಾಸ್ ಬಳಿಯ ಕಂಗಿತ್ತಿಲು ನಿವಾಸಿ ಶ್ರೀಧರ ಮೂಲ್ಯ ಅವರ ಪುತ್ರ, ಬಂಟ್ವಾಳ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಚೇತನ್ (19) ಮೃತಪಟ್ಟವರು.

ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದ. ಅದೇ ರೀತಿ ಇಂದು ಸ್ನೇಹಿತರ ಜೊತೆಗೆ ದೇವಸ್ಥಾನಕ್ಕೆ ತೆರಳಿದ್ದ. ಈ ವೇಳೆ ದೇವಾಲಯದ ಕೆರೆಯಲ್ಲಿ ಸ್ನಾನ ಮಾಡಲೆಂದು ಕೆರೆಗೆ ಇಳಿದಿದ್ದು ಈ ಸಂದರ್ಭ ನೀರಲ್ಲಿ ಮುಳುಗಿ ಮೃತಪಟ್ಟಿರುತ್ತಾನೆ.

ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.