



ಡೈಲಿ ವಾರ್ತೆ: 10/JUNE/2025


ಕುಂದಾಪುರ| ವ್ಯಕ್ತಿ ನಾಪತ್ತೆ – ದೂರು ದಾಖಲು

ಕುಂದಾಪುರ: ಹೆಮ್ಮಾಡಿ ಗ್ರಾಮದ ಸಾಹಿಲ್ (27) ಎಂಬುವವರು ಜೂ. 8 ರಿಂದ ನಾಪತ್ತೆಯಾಗಿದ್ದಾರೆ.
ಕುಂದಾಪುರ ಫುಡ್ ಮಾರ್ಕ್ ಎಂಬ ಹೋಟೇಲ್ ನಲ್ಲಿ ಕೆಲಸ ಮಾಡಿಕೊಂಡಿದ್ದು ಜೂ. 8 ರಂದು ರಾತ್ರಿ 8 ಗಂಟೆ ಸುಮಾರಿಗೆ ಮನೆಯಿಂದ ಕುಂದಾಪುರ ಪೇಟೆಗೆ ಹೋಗಿ ಬರುವುದಾಗಿ ಹೇಳಿ ತನ್ನ ಸ್ಕೂಟಿಯಲ್ಲಿ ಹೋದವರು ವಾಪಾಸು ಮನೆಗೆ ಬಾರದೇ ಕಾಣೆಯಾಗಿದ್ದಾರೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 75/2025 ಕಲಂ: ಗಂಡಸು ಕಾಣೆ ಯಂತೆ ಪ್ರಕರಣ ದಾಖಲಾಗಿರುತ್ತದೆ.