



ಡೈಲಿ ವಾರ್ತೆ: 11/JUNE/2025


ಉಡುಪಿ| ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ: ಆರೋಪಿ ಬಂಧನ

ಉಡುಪಿ: ಮೂಡ ನಿಡಂಬೂರು ಗ್ರಾಮ ಆಶಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಸಾವಿರಾರು ರೂ.ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ.
ಶಂಭುಲಿಂಗ ಮಡಿವಾಳ (37) ಬಂಧಿತ ಆರೋಪಿ.
ಆರೋಪಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ 2,600 ರೂ. ಮೌಲ್ಯದ ವಿವಿಧ ಬ್ರಾಂಡ್ ನ ಮದ್ಯದ ಸಾಚೇಟ್ ಮತ್ತು 3,960 ರೂ.ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.