ಡೈಲಿ ವಾರ್ತೆ: 12/JUNE/2025

ಪಡುಬಿದ್ರಿ| ಆಟೋ ರಿಕ್ಷಾ ಹಾಗೂ ಖಾಸಗಿ ಬಸ್ ನಡುವೆ ಅಪಘಾತ – ಓರ್ವ ಸ್ಥಳದಲ್ಲೇ ಸಾವು

ಪಡುಬಿದ್ರಿ: ಆಟೋ ರಿಕ್ಷಾ ಹಾಗೂ ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಆಟೋ ಪ್ರಯಾಣಿಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಾಯಗೊಂಡ ಘಟನೆ ಗುರುವಾರ ಬೆಳಿಗ್ಗೆ ಕಾರ್ಕಳ – ಪಡುಬಿದ್ರಿ ರಾಜ್ಯ ಹೆದ್ದಾರಿಯ ಅಡ್ವೆ ಗಣಪತಿ ದೇಗುಲದ ಬಳಿ ಸಂಭವಿಸಿದೆ.

ಕಾರ್ಕಳದಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಪದ್ಮಾಂಬಿಕಾ ಬಸ್ಸು ಪಕ್ಕದ ತಿರುವಿನಿಂದ ಬಂದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ಪರಿಣಾಮ
ಆಟೋ ರಿಕ್ಷಾದಲ್ಲಿ ಇದ್ದ ಉತ್ತರಭಾರತ ಮೂಲದ ಕಾರ್ಮಿಕನೋರ್ವ್ ಸ್ಥಳದಲ್ಲೇ ಮೃತ ಪಟ್ಟಿದ್ದು ಮೂವರು ಗಂಭೀರ ಗಾಯ ಗೊಂಡಿದ್ದಾರೆ. ಮೂವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ