


ಡೈಲಿ ವಾರ್ತೆ: 12/JUNE/2025


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಯ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಪಬ್ಲಿಕ್ ನೆಕ್ಸ್ಟ್ ವರದಿಗಾರ ದಾಮೋದರ್ ಮೊಗವೀರ ನಾಯಕವಾಡಿ ಆಯ್ಕೆ

ಕುಂದಾಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಯ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷ ರನ್ನಾಗಿ ಪಬ್ಲಿಕ್ ನೆಕ್ಸ್ಟ್ ವರದಿಗಾರ ದಾಮೋದರ್ ಮೊಗವೀರ ನಾಯಕವಾಡಿ ಅವರನ್ನು ಆಯ್ಕೆ ಮಾಡಿ ರಾಜ್ಯ ಅಧ್ಯಕ್ಷ ರಾದ ಮಲ್ಲಿಕಾರ್ಜುನ ಬಂಗ್ಲೆ ಅವರು ಆದೇಶ ಮಾಡಿದ್ದಾರೆ
ಆದೇಶ ದಲ್ಲಿ ಉಡುಪಿ ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಿಷ್ಠ ವಾಗಿ ಕಟ್ಟುವುದರ ಜೊತೆಗೆ ಪತ್ರಕರ್ತ್ರರ ಸಮಸ್ಯೆಗಳಿಗೆ ಧ್ವನಿಯಾಗಿ ಕಾರ್ಯ ನಿರ್ವಹಿಸುವಂತೆ ತಿಳಿಸಿದ್ದಾರೆ. ನೂತನವಾಗಿ ಉಡುಪಿ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಆಗಿರುವ ದಾಮೋದರ ಅವರಿಗೆ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷ ನಾಗರಾಜ್.ದೈವಜ್ಞ ಮತ್ತು ಉಡುಪಿ ಜಿಲ್ಲೆಯ ಹಿರಿಯ ಪತ್ರಕರ್ತ ರೂಪೇಶ್ .ಕಲ್ಮಾಡಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.