ಡೈಲಿ ವಾರ್ತೆ: 16/JUNE/2025

ಮಳೆ ಬಿರುಸು ಹಿನ್ನಲೆ : ದ.ಕ. ಜಿಲ್ಲೆಯ ಅಂಗನವಾಡಿಯಿಂದ ಪಿಯು ತರಗತಿವರೆಗೆ ಜೂನ್ 16 ಸೋಮವಾರ (ಇಂದು) ರಜೆ ಘೋಷಿಸಿ ಡಿಸಿ ಪರಿಷ್ಕೃತ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜೂನ್ 16 (ಇಂದು) ಸೋಮವಾರ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ತರಗತಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. ಭಾನುವಾರ ರಾತ್ರಿ ಜಿಲ್ಲೆಯ ಐದು ತಾಲೂಕುಗಳಿಗೆ ಮಾತ್ರ ರಜೆ ಘೋಷಿಸಿ ಡೀಸಿ ಆದೇಶ ಹೊರಡಿಸಿದ್ದರು. ಆದರೆ ಇದೀಗ ಮಳೆ ವ್ಯಾಪಕವಾಗಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಆದೇಶ ಪರಿಷ್ಕರಿಸಿದ್ದು ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ ಘೋಷಣೆ ಮಾಡಿದ್ದಾರೆ. ಉಳಿದಂತೆ ಜಿಲ್ಲೆಯಲ್ಲಿ ವಿವಿಧ ಮಳೆ ಸಂಬಂಧಿತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಡೀಸಿ ಸೂಚಿಸಿದ್ದಾರೆ.