



ಡೈಲಿ ವಾರ್ತೆ: 16/JUNE/2025


ಮುಂದುವರಿದ ಮಳೆ ಆರ್ಭಟ:
ಜೂ.17 ರಂದು ಉತ್ತರ ಕನ್ನಡದ 8 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ ರಜೆ ಘೋಷಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಮಂಗಳವಾರ, ಜೂ17) ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ ಮತ್ತು ಯಲ್ಲಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.