



ಡೈಲಿ ವಾರ್ತೆ: 17/JUNE/2025


ಚಿಕ್ಕಮಗಳೂರು| ಮನೆಯ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಓರ್ವ ಮಹಿಳೆಗೆ ಗಾಯ!

ಚಿಕ್ಕಮಗಳೂರು: ಭಾರೀ ಗಾಳಿ ಮಳೆಗೆ ಮನೆಯ ಮೇಲೆ
ಬೃಹತ್ ಗಾತ್ರದ ಮರವೊಂದು ಬಿದ್ದು ಮನೆಯಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ನಡೆದಿದೆ.
ಮರ ಬಿದ್ದ ಪರಿಣಾಮ ಮನೆಯ ಒಂದು ಭಾಗಕ್ಕೆ ಹಾನಿಯಾಗಿದ್ದು ಜೊತೆಗೆ ಗೃಹಪಯೋಗಿ ವಸ್ತುಗಳು ಸಂಪೂರ್ಣ ನಾಶವಾಗಿದೆ, ಮರ ಬೀಳುವ ಸದ್ದು ಕೇಳುತ್ತಿದ್ದಂತೆ ಮನೆಯಿಂದ ಹೊರ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ ಆದರೆ ಈ ವೇಳೆ ಮರದ ಟೊಂಗೆಯೊಂದು ಪ್ರೇಮಾ ಅವರ ಮೇಲೆ ಬಿದ್ದು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ತಾಲೂಕು ಆಡಳಿತ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.