ಡೈಲಿ ವಾರ್ತೆ: 26/JUNE/2025

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಸಾಲಿಗ್ರಾಮ ಪ. ಪಂ. ಸ್ಥಾನಿಯ ಸಮಿತಿಯ ಮಾಜಿ ಅಧ್ಯಕ್ಷ ಬಿ. ಕೆ ತೇಜ ಪೂಜಾರಿ ಅಸೌಖ್ಯದಿಂದ ನಿಧನ

ಕೋಟ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಸಾಸ್ತಾನ ಮಂಡಲ ಪಂಚಾಯತ್ ಮಾಜಿ ಸದಸ್ಯರು ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸ್ಥಾನಿಯ ಸಮಿತಿಯ ಮಾಜಿ ಅಧ್ಯಕ್ಷರಾದ ಬಿ. ಕೆ ತೇಜ ಪೂಜಾರಿ ಅವರು ಅಸೌಖ್ಯದಿಂದ ಇಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರು ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಕಾರ್ಯಕರ್ತರಿಗೆ ಮಾರ್ಗದರ್ಶಕರಾಗಿದ್ದರು. ಇವರ ನಿಧನಕ್ಕೆ ಕೋಟ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಂತಾಪವನ್ನು ಸೂಚಿಸಿರುತ್ತಾರೆ.