



ಡೈಲಿ ವಾರ್ತೆ: 30/JUNE/2025


ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ : ಲಾರಿ ಮತ್ತು ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಸೋಮವಾರ ಸಂಭವಿಸಿದೆ.
ಮೃತರನ್ನು ಬಂಟ್ವಾಳದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ, ಶಂಭೂರು ಸಮೀಪದ ಕೊಪ್ಪಳ ನಿವಾಸಿ ಚಿದಾನಂದ (50) ಎಂದು ತಿಳಿದುಬಂದಿದೆ.
ಚಿದಾನಂದ ಅವರು ತಮ್ಮ ಸ್ಕೂಟರ್ ನಲ್ಲಿ ಬಿ.ಸಿ.ರೋಡ್ ಪೇಟೆಯಿಂದ ಬಂದು ಅಜ್ಜಿ ಬೆಟ್ಟು ಕ್ರಾಸ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಿ.ಸಿ.ರೋಡಿನಿಂದ ಮಂಗಳೂರು ಕಡೆಗೆ ಹೋಗುವ ಲಾರಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಚಿದಾನಂದ ಅವರು ಲಾರಿಯ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.