ಡೈಲಿ ವಾರ್ತೆ: 01/ಜುಲೈ/2025

ಬಂಟ್ವಾಳ| ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿ ಬಂಧನ!

ಬಂಟ್ವಾಳ: ಕೊಲೆಯತ್ನ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ಬಳಿಕ ಕಳೆದ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಿ.ಮೂಡ ಗ್ರಾಮದ ನಿವಾಸಿ ಅಕ್ಬರ್ ಸಿದ್ದೀಕ್ ಎಂದು ಹೆಸರಿಸಲಾಗಿದೆ. 

2011 ರಲ್ಲಿ ತುಂಬೆ ಗ್ರಾಮದ ಅರಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ಆರೋಪಿಯಾಗಿರುವ ಈತ ಕಳೆದ ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ವಿರುದ್ದ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಈತನನ್ನು ಸೋಮವಾರ ಧರ್ಮಸ್ಥಳದಲ್ಲಿ ದಸ್ತಗಿರಿ ಮಾಡಿರುವ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.