



ಡೈಲಿ ವಾರ್ತೆ: 02/ಜುಲೈ/2025


ಮರುವಂತೆ|ಸ್ಕೂಟರ್ ಗೆ ಪಿಕ್ ಅಪ್ ವಾಹನ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು

ಗಂಗೊಳ್ಳಿ: ಪಿಕ್ ಅಪ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮರವಂತೆ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮರವಂತೆಯ ಬೆಟ್ಟಿನಮನೆ ನಿವಾಸಿ ಲಕ್ಷ್ಮಣ ಪೂಜಾರಿ (45) ಮೃತಪಟ್ಟವರು.
ಅವರು ಸ್ಕೂಟರ್‌ನಲ್ಲಿ ತ್ರಾಸಿ ಕಡೆಯಿಂದ ಮರವಂತೆಗೆ ಬಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮರವಂತೆ ಬಸ್ ನಿಲ್ದಾಣದ ಸಮೀಪ ಯೂಟರ್ನ್ ತೆಗೆದುಕೊಳ್ಳುತ್ತಿರುವಾಗ ಬೈಂದೂರು ಕಡೆಯಿಂದ ಬರುತ್ತಿದ್ದ ಪಿಕ್ ಅಪ್ ವಾಹನ ಡಿಕ್ಕಿ ಹೊಡೆಯಿತು.
ಅಪಘಾತದ ರಭಸಕ್ಕೆ ಅವರು ಸ್ಥಳದಲ್ಲೇ ಸಾವನ್ನಪ್ಪಿದರು. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.