ಡೈಲಿ ವಾರ್ತೆ: 02/ಜುಲೈ/2025

ಮಣಿಪಾಲ: ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ – ಮಹಿಳೆ ಸ್ಥಳದಲ್ಲೇ ಸಾವು

ಮಣಿಪಾಲ: ಮಹಿಳೆ ಯೋರ್ವರು ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದು ದಾರುಣವಾಗಿ ಮೃತಪಟ್ಟ ಘಟನೆ ಮಣಿಪಾಲ ಈಶ್ವರನಗರದ ಎಂಐಟಿ ಕಾಲೇಜು ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ.

ಮೃತರನ್ನು ವಿನೋದ ಸಿಸ್ಟರ್ (65) ಎಂದು ಗುರುತಿಸಲಾಗಿದೆ. ಅವರು ತನ್ನ ಮಗಳ ಮಕ್ಕಳನ್ನು ಶಾಲಾ ಬಸ್ ನಿಂದ ಇಳಿಸಿ ಮನೆ ಬಿಟ್ಟು ಬಳಿಕ ಉಪ್ಪೂರು ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಬಸ್ಸಿನ ಚಕ್ರದಡಿಗೆ ಸಿಲುಕಿದ ಮಹಿಳೆಯ ದೇಹ ಛಿದ್ರ ಛಿದ್ರಗೊಂಡಿದೆ.
ಮಣಿಪಾಲ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.