ಡೈಲಿ ವಾರ್ತೆ: 03/ಜುಲೈ/2025

ಮಂಗಳೂರು| ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ, ಸಿಸಿಬಿ ಪೊಲೀಸರ ಕಾರ್ಯಾಚರಣೆ – ಆರೋಪಿ ಬಂಧನ!

ಮಂಗಳೂರು: ನಿಷೇದಿತ ಮಾದಕ ವಸ್ತು ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆಸೈಗೋಳಿಯ ಕೊಣಾಜೆ ನಿವಾಸಿ ಅಬ್ದುಲ್ ಕಬೀರ್ ಅಲಿಯಾಸ್‌ ಪಾರಿವಾಳ ಕಬೀರ್(36) ಬಂಧಿತ ಆರೋಪಿ.

ಬೆಂಗಳೂರು, ಮುಂಬೈಯಿಂದ ಡ್ರಗ್ಸ್ ತರಿಸಿಕೊಂಡು ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆ ಬಳಿ ಕಾರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ 1,20,000 ರೂ ಮೌಲ್ಯದ 12.05 ಗ್ರಾಂ ಡ್ರಗ್ಸ್ ಸಹಿತ ಆರೋಪಿಯನ್ನ ಬಂಧಿಸಿದ್ದಾರೆ.

ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.