ಡೈಲಿ ವಾರ್ತೆ: 04/ಜುಲೈ/2025

ಬಂಟ್ವಾಳ| ನಿರಂತರ ಮಳೆ ಹಿನ್ನಲೆ ಇಂದು (ಜುಲೈ 4) ರಂದು ಬಂಟ್ವಾಳ ತಾಲೂಕಿನ ಅಂಗನವಾಡಿ, ಶಾಲೆ, ಪಿಯುಸಿ ತರಗತಿಗಳಿಗೆ ರಜೆ ಘೋಷಿಸಿದ ತಹಶೀಲ್ದಾರ್

ಬಂಟ್ವಾಳ : ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವ ‌ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು , ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ಶುಕ್ರವಾರ ರಜೆ ಘೋಷಿಸಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಆದೇಶಿಸಿದ್ದಾರೆ.