



ಡೈಲಿ ವಾರ್ತೆ: 05/ಜುಲೈ/2025


ಬಂಟ್ವಾಳ| ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು – ಚಾಲಕ ಸ್ಥಳದಲ್ಲೇ ಸಾವು

ಬಂಟ್ವಾಳ : ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಮೃತರನ್ನು ಪಾವೂರು ನಿವಾಸಿ ನೌಫಳ್ ಎಂದು ಗುರುತಿಸಲಾಗಿದೆ. ಇವರು ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.