



ಡೈಲಿ ವಾರ್ತೆ: 08/ಜುಲೈ/2025


ಬೆಳ್ಳಂಬೆಳ್ಳಗೆ ಶಾಲಾ ಬಸ್ಸಿಗೆ ರೈಲು ಢಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು!

ಚೆನ್ನೈ: ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ಸಿಗೆ ಪ್ಯಾಸೆಂಜರ್ ರೈಲೊಂದು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಾಲಾ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟು, ಚಾಲಕ ಸೇರಿ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಜು.8 ರಂದು ಮಂಗಳವಾರ ಬೆಳ್ಳಂಬೆಳ್ಳಗೆ ತಮಿಳುನಾಡಿನ ಕಡಲೂರು ಬಳಿಯ ಸೆಮ್ಮಂಕುಪ್ಪಂನಲ್ಲಿ ಸಂಭವಿಸಿದೆ.
ಮಂಗಳವಾರ ಬೆಳಿಗ್ಗೆ 7:45ರ ಸುಮಾರಿಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ಸು ಕಡಲೂರು ಜಿಲ್ಲೆಯ ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ಹಳಿ ದಾಟುತ್ತಿದ್ದ ಸಂದರ್ಭ ಪ್ಯಾಸೆಂಜರ್ ರೈಲು ಢಿಕ್ಕಿ ಹೊಡೆದಿದೆ ಪರಿಣಾಮ ಬಸ್ಸು ಕೆಲ ದೂರ ಎಸೆಯಲ್ಪಟ್ಟಿದ್ದು ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟರೆ, ನಾಲ್ಕು ಮಂದಿ ಗಂಭೀರ ಗಾಯಗೊಂಡಿದ್ದು ಅವರನ್ನು ಕಡಲೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿ ರೈಲ್ವೆ ಇಲಾಖೆ ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ತನಿಖೆ ಆರಂಭಿಸಿದ್ದಾರೆ.