ಡೈಲಿ ವಾರ್ತೆ: 09/ಜುಲೈ/2025

ಹೊಸಂಗಡಿ|ಸರಕಾರಿ ಪದವಿ ಪೂರ್ವ ಕಾಲೇಜುನಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮ

ಹೊಸಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು, ಹೊಸಂಗಡಿ ಇಲ್ಲಿ ದಿನಾಂಕ 26/06/2025 ಗುರುವಾರ “ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ” ದ ಅಂಗವಾಗಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮಕ್ಕೆ ಅರಿವು ಮೂಡಿಸಲು ಆಗಮಿಸಿದ ಅಮಾಸೆಬೈಲು ಪೊಲೀಸ್ ಠಾಣೆಯ ಎಸ್. ಐ ಶ್ರೀಯುತ ಅಶೋಕ್ ಕುಮಾರ್ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ‘ ನಶಾ ಮುಕ್ತ ಭಾರತ ‘ ಈ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳನ್ನು ತಿಳಿಸಿದರು. ಬೀಡಿ, ಸಿಗರೇಟ್, ತಂಬಾಕು, ಇತರ ಮಾದಕ ದ್ರವ್ಯಗಳ ದುಶ್ಚಟಗಳಿಂದ ಆಗುವ ಪರಿಣಾಮಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಅಲ್ಲದೆ ಸೈಬರ್ ಕ್ರೈಂ ಹೇಗೆ ನಡೆಯುತ್ತದೆ, ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎನ್ನುವುದರ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.
ಪ್ರಾಂಶುಪಾಲರಾದ ಶ್ರೀಯುತ ರಣಜಿತ್ ಕುಮಾರ್ ಶೆಟ್ಟಿ ಇವರು ಮಕ್ಕಳಿಂದ ಪ್ರತಿಜ್ಞಾವಿಧಿಯನ್ನು ಬೋಧಿಸಿ, ಈಗಿನ ಯುವ ಜನತೆ ಹೇಗೆ ದುಶ್ಚಟಗಳಿಗೆ ಮಾರು ಹೋಗುತ್ತಾರೆ, ಮತ್ತು ಅದರ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಿದರು. ಈ ಸಂದರ್ಭ ಅಮಾಸೆಬೈಲು ಪೊಲೀಸ್ ಠಾಣೆಯ ಸಿಬ್ಬಂಧಿಗಳು, ಕಾಲೇಜಿನ ಸಿಬ್ಬಂದಿ ವರ್ಗ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕನ್ನಡ ಉಪನ್ಯಾಸಕಿ ಶ್ರೀಮತಿ ವೈಶಾಲಿ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕರಾದ ಶ್ರೀಯುತ ವೆಂಕಟೇಶ್ ಸ್ವಾಗತಿಸಿ, ಸಮಾಜಶಾಸ್ತ್ರಉಪನ್ಯಾಸಕಿ ಕು.ರಾಜೇಶ್ವರಿ ವಂದಿಸಿದರು.