ಡೈಲಿ ವಾರ್ತೆ: 11/ಜುಲೈ/2025

ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಮಂಗಳೂರು ನಗರ ಜಿಲ್ಲಾ ಸಮಿತಿಯ ಮಾಸಿಕ ಸಭೆ

ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಮಂಗಳೂರು ನಗರ ಜಿಲ್ಲಾ ಸಮಿತಿಯ ಮಾಸಿಕ ಸಭೆ ಜಿಲ್ಲಾಧ್ಯಕ್ಷರಾದ ಇರ್ಫಾನ್ ಕಾನರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.

ಸಭೆಯ ವೀಕ್ಷಕರಾಗಿ ಆಗಮಿಸಿದ ರಾಜ್ಯ ಪ್ರತಿನಿಧಿ ಹಮೀದ್ ಸಾಲ್ಮರ ರವರು ಪ್ರಸ್ತಾವಿಕವಾಗಿ ಮಾತನಾಡಿ ಜಿಲ್ಲೆಯಲ್ಲಿ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಅವರನ್ನು ಸಂಘಟಿಸಿ ಪ್ರಭುದ್ದರಾಗಿ ಮಾಡುವ ಮಹತ್ತರವಾದ ಹೊಣೆಗಾರಿಕೆ ನಮ್ಮ ಮೇಲೆ ಇದೆ ಅದಕ್ಕಾಗಿ ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದರು

ಈ ಸಂಧರ್ಭದಲ್ಲಿ SDTU ರಾಜ್ಯ ಕಾರ್ಯದರ್ಶಿ ಖಾದರ್ ಪರಂಗೀಫೇಟೆ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹಿಮಾನ್ ಬೋಳಿಯಾರ್ ಜಿಲ್ಲಾ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಮುನ್ನೂರು ಎಸ್.ಡಿ.ಟಿ.ಯು ಆಟೋ ಚಾಲಕರ ಯೂನಿಯನ್ ಮಂಗಳೂರು ನಗರ ಸಮಿತಿ ಅಧ್ಯಕ್ಷ ಇಲ್ಯಾಸ್ ಬೆಂಗ್ರೆ, ಸುರತ್ಕಲ್ ಆಟೋ ಯೂನಿಯಾನ್ ಅಧ್ಯಕ್ಷರಾದ ಕಬೀರ್ ಸುರತ್ಕಲ್ ಉಪಧ್ಯಾಕ್ಷರಾದ ಇಸ್ಮಾಯಿಲ್ ಹಾಗೂ ಸದಸ್ಯರಾದ ಅನ್ವರ್ ರವರು ಉಪಸ್ಥಿತರಿದ್ದರು.

ಸಭೆಯಲ್ಲಿ ಕೈಗೊಂಡ ನಿರ್ಣಯಗಳು

  • ಪ್ರತೀ ಮೂರು ವರ್ಷಕ್ಕೊಮ್ಮೆ ತಳಮಟ್ಟದಿಂದ ರಾಷ್ಟ್ರಮಟ್ಟದವರೆಗೂ ನಡೆಯುವ ಯೂನಿಯನ್ ನ ಆಂತರಿಕ ಚುನಾವಣೆ/ಆಯ್ಕೆ ಪ್ರಕ್ರಿಯೆಗೆ ಅಸ್ತಿತ್ವದಲ್ಲಿರುವ ಎಲ್ಲಾ SDTU ಕಾರ್ಮಿಕ ಘಟಕಗಳಿಗೆ ಪ್ರತಿನಿಧಿಗಳನ್ನು ಆಯ್ಕೆ ನಡೆಸುವುದು
  • ಕರಾವಳಿ ಜಿಲ್ಲೆಯ ಶ್ರಮಿಕರ ಮೂಲ ಜೀವನೋಪಾಯವಾದ ಕೆಂಪು ಕಲ್ಲು,ಮರಳು ಮತ್ತು ಜಲ್ಲಿಯ ಪೂರೈಕೆಗೆ ಸರಕಾರ ನಿರ್ಬಂಧ ವಿಧಿಸಿ ಸ್ಥಗಿತಗೊಳಿಸಿದ ಕಾರಣದಿಂದ ಕೆಲಸ ಇಲ್ಲದೆ ಕಾರ್ಮಿಕರ ಸಮಸ್ಯೆ ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದೂ ಈ ಸಮಸ್ಯೆಯ ಈಡೇರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು
  • ಕೇಂದ್ರ ಸರಕಾರ ಜಾರಿಗೆ ತರಲು ಹೊರಟಿರುವ ಕಾರ್ಮಿಕರ ಮತ್ತು ರೈತ ವಿರೋಧಿ ಕಾಯ್ದೆಗಳನ್ನು ವಾಪಸು ಪಡಯಬೇಕು ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು