


ಡೈಲಿ ವಾರ್ತೆ: 12/ಜುಲೈ/2025


ಕಿನಿಗೋಳಿ| ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ- ಉದ್ಯಮಿ ರಾಕೀ ಪಿಂಟೋ ಬಂಧನ

ಮಂಗಳೂರು: ಕಿನ್ನಿಗೋಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಿನ್ನಿಗೋಳಿಯ ಪಿಂಟೋ ಗಾರ್ಡನ್ ಮಾಲೀಕ ಉದ್ಯಮಿ ರಾಕೀ ಪಿಂಟೋ (68) ಎಂಬಾತನ ಮೇಲೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆ ಕೆಲಸ ಮಾಡಿಕೊಂಡಿದ್ದ ಬಾಲಕಿಯ ತಾಯಿ ಈ ಬಗ್ಗೆ ದೂರು ನೀಡಿದ್ದು, ಬಾಲಕಿಯನ್ನು ಶಾಲೆಗೆ ಬಿಡುವ ನೆಪದಲ್ಲಿ ಕಾರಿನಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸೆಗಿದ್ದಾರೆ ಎಂದು ತಾಯಿ ದೂರು ನೀಡಿದ ಹಿನ್ನಲೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಂತೆ ಕಾರು ಸಹಿತ ರಾಕಿ ಪಿಂಟೋ ಅವರನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ರಕ್ತದೊತ್ತಡ ಹೆಚ್ಚಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.