


ಡೈಲಿ ವಾರ್ತೆ: 17/ಜುಲೈ/2025


ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ಪಿತೃವಿಯೋಗ

ಕಾರ್ಕಳ: ಶಾಸಕ ವಿ.ಸುನಿಲ್ ಕುಮಾರ್ ಅವರ ತಂದೆ ಎಂ.ಕೆ ವಾಸುದೇವ (78) ಅವರು ವಯೋಸಹಜ ಖಾಯಿಲೆಯಿಂದ ನಿಧನ ಹೊಂದಿದ್ದಾರೆ.
ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇವರ ಪಾರ್ಥಿವ ಶರೀರವನ್ನು ಇಂದು ಮಣಿಪಾಲದಿಂದ ನಿಟ್ಟೆ ಗ್ರಾಮದ ಪದವಿಗೆ ಕರೆತರಲಾಗುವುದು. ಇಂದು ಸಂಜೆ ಕುಟುಂಬಸ್ಥರ ಉಪಸ್ಥಿತಿಯಲ್ಲಿ ಅಂತಿಮ ವಿಧಿವಿಧಾನಗಳು ಜರುಗಲಿದೆ.
ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಇವರು ಸಮಾಜಮುಖಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.