ಡೈಲಿ ವಾರ್ತೆ: 19/ಜುಲೈ/2025

ಉಡುಪಿ|ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್: ರೋಗಿ ಮೃತ್ಯು!

ಉಡುಪಿ: ಉಡುಪಿಯ ಮಣಿಪಾಲ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ರೋಗಿ ಸಾವನ್ನಪ್ಪಿದ ಘಟನೆ ಎಂಜಿಎಂ ಕಾಲೇಜಿನ ಮುಂಭಾಗ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಕೋಟೇಶ್ವರದಿಂದ ಮಣಿಪಾಲ ಆಸ್ಪತ್ರೆಗೆ ಆ್ಯಂಬುಲೆನ್ಸ್‌ನಲ್ಲಿ ರೋಗಿಯೊಬ್ಬರನ್ನು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಎಂಜಿಎಂ ಕಾಲೇಜಿನ ಸಮೀಪ ರಸ್ತೆ ಡಿವೈಡರ್ ಬಳಿ ನಿಯಂತ್ರಣ ಕಳೆದುಕೊಂಡು ಬ್ಯಾರಿಕೇಡ್‌ಗಳಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.

ಅಪಘಾತದ ನಂತರ ತಕ್ಷಣ ರೋಗಿಯನ್ನು ಮತ್ತೊಂದು ಆ್ಯಂಬುಲೆನ್ಸ್‌ಗೆ ಸ್ಥಳಾಂತರಿಸಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.