


ಡೈಲಿ ವಾರ್ತೆ: 21/ಜುಲೈ/2025


ಅಂಕೋಲಾ| ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು!

ಅಂಕೋಲಾ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿ ಹೊಡೆದು ಹಳ್ಳಕ್ಕೆ ಬಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ
ತಾಲೂಕಿನ ಅಗಸೂರು ಬಳಿ ಜು. 21 ರಂದು ಸೋಮವಾರ ಮುಂಜಾನೆ ಸಂಭವಿಸಿದೆ.
ಬೆಳಗಾವಿಯಿಂದ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ, ಕಿರು ಸೇತುವೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಪರಿಣಾಮವಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ, 18ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.