


ಡೈಲಿ ವಾರ್ತೆ: 22/ಜುಲೈ/2025


ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ: 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರೆದಿದೆ. ಕಳೆದ ಹಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದೂ ಕೂಡಾ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಇನ್ನು ಮೈಸೂರು, ಮಂಡ್ಯ, ಚಾಮರಾಜನಗರ,ಧಾರವಾಡ, ಬೀದರ್, ಬೆಳಗಾವಿ, ರಾಯಚೂರು, ಕಲಬುರಗಿ, ಹಾವೇರಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳದಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.