ಡೈಲಿ ವಾರ್ತೆ: 22/ಜುಲೈ/2025

ಕೋಟತಟ್ಟು| ಕೊರಗ ಕುಟುಂಬಕ್ಕೆ ಮನೆ ನಿರ್ಮಿಸುತ್ತಿರುವ ಸ್ಥಳಕ್ಕೆ
ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭೇಟಿ

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೋಟತಟ್ಟು ವ್ಯಾಪ್ತಿಯ ಚಿಟ್ಟಿಬೆಟ್ಟು ಪರಿಸರದ ಕೊರಗ ಕುಟುಂಬಕ್ಕೆ ಎಂಟು ಮನೆ ನಿರ್ಮಿಸುತ್ತಿರುವ ಸ್ಥಳಕ್ಕೆ ಬ್ರಹ್ಮಾವರ ತಾಲೂಕು ಪಂಚಾಯಿತಿನ ಕಾರ್ಯನಿರ್ವಹಣಾಧಿಕಾರಿ ಹೆಚ್ ಇಬ್ರಾಹಿಂಪುರ ಮತ್ತು ಸಹಾಯಕ ನಿರ್ದೇಶಕರಾದ ಮಹೇಶ್ ಅವರು ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ಅವರು ಮಾತನಾಡಿ ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೊರಗ ಕಾಲೋನಿಗೆ ಎಂಟು ಮನೆ ನಿರ್ಮಿಸುವ ಯೋಜನೆ ಸಂವಿಧಾನದ ಆಶಯದಂತೆ ತಳಮಟ್ಟದ ಸಮುದಾಯದವರನ್ನು ಮುಖ್ಯ ವಾಹಿನಿಗೆ ತರುವ ಕಾರ್ಯಕ್ರಮ ಎಂದು ಕಾರ್ಯ ನಿರ್ವಹಣಾಧಿಕಾರಿ ಹೆಚ್ ಇಬ್ರಾಹಿಂಪುರ ಶ್ಲಾಘಿಸಿದರು.

ಈ ಸಂಧರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ ಸತೀಶ್ ಕುಂದರ್ ಬಾರಿಕೆರೆ, ಉಪಾಧ್ಯಕ್ಷರಾದ ಶ್ರೀಮತಿ ಸರಸ್ವತಿ, ಸದಸ್ಯರಾದ ಎಚ್ ಪ್ರಮೋದ್ ಹಂದೆ, ವಾಸು ಪೂಜಾರಿ, ಶ್ರೀಮತಿ ಸೀತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಹಾಗೂ ಕೊರಗ ಕುಟುಂಬದ ಫಲಾನುಭವಿಗಳು ಉಪಸ್ಥಿತರಿದ್ದರು.