ಡೈಲಿ ವಾರ್ತೆ: 23/ಜುಲೈ/2025

ಉತ್ತರಕನ್ನಡ ಜಿಲ್ಲೆಯಲ್ಲಿ ಬಾರಿ ಮಳೆ ಹಿನ್ನಲೆ ಇಂದು (ಜು.23) 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ: ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಈ ಐದು ತಾಲೂಕಿನ ಎಲ್ಲಾ ಅಂಗನವಾಡಿ ಹಾಗೂ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ಜುಲೈ 23, 2025 (ಬುಧವಾರ) ರಂದು ರಜೆ ಘೋಷಿಸಲಾಗಿದೆ.

ಭಾರೀ ಮಳೆ ಸಾಧ್ಯತೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.