


ಡೈಲಿ ವಾರ್ತೆ: 23/ಜುಲೈ/2025


ಪುತ್ತೂರು: ಬಸ್ಸಿನಲ್ಲಿ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ – ಸಾರ್ವಜನಿಕರ ಸಹಕಾರದಿಂದ ಆರೋಪಿ ಬಂಧನ

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಮುಸ್ಸಂಜೆ ಪುತ್ತೂರಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಆರೋಪಿಯನ್ನು ಮಂಗಳೂರಿನ ತೌಹೀದ್ ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬಸ್ಸು ಸಂಜೆ ಸುಮಾರು 6:30 ಗಂಟೆಗೆ ಬಂಟ್ವಾಳ ತಾಲೂಕಿನ ಮಾಣಿ ಬಳಿ ತಲುಪಿದಾಗ ಆರೋಪಿಯು ತನ್ನ ಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿನಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ವಿಚಾರವನ್ನು ವಿದ್ಯಾರ್ಥಿನಿ ತಂದೆಗೆ ಪೋನ್ ಮುಖಾಂತರ ತಿಳಿಸಿದ್ದಾಳೆ. ಬಸ್ ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ತಲುಪಿದಾಗ ಆರೋಪಿಯು ಬಸ್ಸಿನ ತುರ್ತು ನಿರ್ಗಮನ ಕಿಟಕಿಯ ಮೂಲಕ ಹಾರಲು ಪ್ರಯತ್ನಿಸಿದಾಗ ವಿದ್ಯಾರ್ಥಿನಿಯ ತಂದೆ ಮತ್ತು ಸಾರ್ವಜನಿಕ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಪಿರ್ಯಾದಿದಾರರು ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅ.ಕ್ರ: 56/2025 ಕಲಂ: 75 BNS 2023 ರಂತೆ ಪ್ರಕರಣ ದಾಖಾಲಿಸಿಕೊಂಡು ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.